Advertisement
ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Share

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜವನ್ನು ಅರಿತುಕೊಳ್ಳಲು ಹಾಗೆಯೇ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನು ರೂಪಿಸಲು ಇದು ಸಹಕಾರಿಯಾಗುತ್ತದೆ. ನಾವು ನಾಲ್ಕು ಗೋಡೆಗಳಿಂದ ಹೊರಬಂದು ಸಮಾಜದಲ್ಲಿ ಬೆರೆಯುವಂತೆ ಮಾಡುತ್ತಾ ಜೀವನ ದರ್ಶನವನ್ನು ನೀಡುತ್ತದೆ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿವಿ, ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನ ಸಾಜ ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಇತ್ತೀಚೆಗೆ ಮಾತನಾಡಿದರು. ವಿದ್ಯಾರ್ಥಿಗಳು ವರ್ಷಕ್ಕೊಮ್ಮೆ ಇಂತಹ ಶಿಬಿರದಲ್ಲಿ ಸೇರುವುದರಿಂದ ಸಮಾಜಸೇವೆ ಎಂದರೇನು ಹಾಗೂ ಪ್ರತಿಯೊಬ್ಬ ನಾಗರಿಕನ ಪಾತ್ರ ಎಂತಹದ್ದು ಎಂಬುದನ್ನು ಇಲ್ಲಿ ಕಲಿಯಲು ಸಾಧ್ಯ. ಅದೇ ರೀತಿ ಇಲ್ಲಿ ಸಿಗುವ ಅನುಭವ ಜೀವನಕ್ಕೆ ಬೇಕಾದ ಪಾಠವನ್ನು ಕಲಿಸುತ್ತದೆ ಎಂದು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನನುಕೂಲತೆ ಇರುವಲ್ಲಿ ಪ್ರತಿಭೆಗಳು ಬೆಳಗುತ್ತವೆ. ಅದಕ್ಕೆ ವೇದಿಕೆಯನ್ನು ನೀಡುತ್ತಿರುವುದು ಎನ್‍ಎಸ್‍ಎಸ್ ಆಗಿದೆ. ಇದರಿಂದ ಅನೇಕ ಯುವ ಮನಸ್ಸುಗಳು ಕ್ರಿಯಾಶೀಲಗೊಂಡು ಮತ್ತಷ್ಟು ಪ್ರಜ್ವಲಿಸುವಂತಾಗಬೇಕು ಇದಕ್ಕೆ ಇಂತಹ ಶಿಬಿರಗಳನ್ನು ಸರಿಯಾಗಿ ಸದುಪಯೋಗಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಭಂಡಾರಿ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಆಶಯದ ಮಾತುಗಳನ್ನಾಡಿದರು. ತಾಲೂಕು ಪಂಚಾಯತ್ ಸದಸ್ಯೆ ದಿವ್ಯ ಪುರುಷೋತ್ತಮ, ಬಲ್ನಾಡುಗ್ರಾಮ ಪಂಚಾಯತ್ ಅಧ್ಯಕ್ಷೆ ವಿನಯ, ತಾಲೂಕು ಪಂಚಾಯತ್‍ನ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಾಲಾ ಮುಖ್ಯಗುರು ಅನ್ನಪೂರ್ಣೇಶ್ವರಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಅನುರಾಧಾ ನಾಯ್ಕ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ಸ್ವಾಗತಿಸಿದರು. ದೀಕ್ಷಿತ್ ಬಂದಾಜೆ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿದ್ಯಾ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

12 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

12 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago