ಸುದ್ದಿಗಳು

ವಿವೇಕಾನಂದ ಜಯಂತಿ ಪ್ರಯುಕ್ತ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಮಾಜಕ್ಕೆ ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಸಾರಿದ, ಯುವ ಸಮುದಾಯಕ್ಕೆ ದಾರಿದೀಪವಾದ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಅಭಿಪ್ರಾಯಪಟ್ಟರು.

Advertisement

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ ಕ್ರಾಸ್ ಘಟಕ ಹಾಗೂ ವಿಕ್ರಮ ಯುವಕ ಮಂಡಲ ಜಯನಗರ ಇವುಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಪ್ರಯುಕ್ತ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಂಡ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ `ಅರಿವಿನಿಂದ ಪ್ರಗತಿಯೆಡೆಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ವಧರ್ಮ ಸಮನ್ವಯತೆಯನ್ನು ಸಾರಿದ ವಿವೇಕಾನಂದರು ಯುವಕರಿಗೆ ಮಾರ್ಗದರ್ಶಕರಾದವರು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ ಗಿರಿಧರಗೌಡ ಮಾತನಾಡಿ ದೇಶಕಟ್ಟುವ ಶಕ್ತಿ ಯುವಕರಲ್ಲಿದೆ, ಯುವಕರು ಮನಸ್ಸು ಮಾಡಿದರೆ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು. ಕೆ.ವಿ.ಜಿ ಕ್ಯಾಂಪಸ್‍ನ ವಿದ್ಯಾರ್ಥಿ ಕ್ಷೇಮಾಧಿಕಾರಿ ಜವರೇಗೌಡ.ಡಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟ್, ವಿಕ್ರಮಯುವ ಮಂಡಲದ ಪೂರ್ವಾಧ್ಯಕ್ಷ ಸುರೇಂದ್ರ ಕಾಮತ್, ನೆಹರು ಯುವಕೇಂದ್ರ ದಕ್ಷಿಣಕನ್ನಡ ಜಿಲ್ಲೆಯ ನಾಮ ನಿರ್ದೇಶಿತ ಸದಸ್ಯ ಕಿಶನ್ ಜಬಳೆ, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಸನ್ನ ಮಾತನಾಡಿದರು. ಯುವರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜೇಸಿ ವಲಯ ತರಬೇತುದಾರ ಚಂದ್ರಶೇಖರ ಬಿಳಿನೆಲೆ, ಶಿಕ್ಷಣ ಸಂಯೋಜಕ ಡಾ.ಸುಂದರಕೇನಾಜೆ, ಭವಾನಿಶಂಕರ ಅಡ್ತಲೆ, ಸಾಯಿರಾಂ ಸುಳ್ಯ ತರಬೇತುದಾರರಾಗಿದ್ದರು. ಮೌನ,ತೇಜಸ್ವಿನಿ, ರಚನಾ ಪ್ರಾರ್ಥಿಸಿದರು. ಕುಲದೀಪ್ ಸ್ವಾಗತಿಸಿ, ಅಶ್ವಿತಾ ವಂದಿಸಿದರು. ಜಯಮಾಲ ಕೆ.ವಿ ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್‍ಕ್ರಾಸ್ ಘಟಕ ನಾಯಕರಾದ ಭುವನ್ ಪಿ,ಕುಮುದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

4 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

5 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

13 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

14 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

16 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

22 hours ago