ಪುತ್ತೂರು: ಕೊರೋನಾ ವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣದ ಬಹು ಅಮೂಲ್ಯ ಸಮಯವನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಂಕಷ್ಟಕ್ಕೀಡಾಗದಂತೆ ಮಾಡಲು ವಿವೇಕಾನಂದ ಸಂಸ್ಥೆಯು ಮುಂದಾಗಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಗಿಸಿದ ಮತ್ತು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರಥಮ ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ಜುಲೈ 13 ರಿಂದ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಗಳನ್ನು ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಅವಕಾಶವನ್ನು ಒದಗಿಸುತ್ತಿದೆ.
ಅನುಭವೀ ಹಾಗೂ ನುರಿತ ಉಪನ್ಯಾಸಕ ವೃಂದದವರಿಂದ ಪಿಸಿಯಂಬಿ ವಿಷಯಗಳಲ್ಲಿ ತರಗತಿಗಳು ನಡೆಯಲಿದ್ದು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ವಿವರಣೆ ಮತ್ತು ಪ್ರಯೋಗಗಳ ಮೂಲಕ ವಿಶೇಷ ಪೂರಕ ಪಾಠ ನಡೆಯಲಿದೆ. ವಿದ್ಯಾರ್ಥಿಗಳು ಮನೆಯಿಂದಲೇ ಲ್ಯಾಪ್‍ಟಾಪ್ ಅಥವಾ ಮೊಬೈಲ್ ಬಳಸಿ ತರಬೇತಿಯನ್ನು ಪಡೆಯಬಹುದು. ತರಬೇತಿ ಅವಧಿಯಲ್ಲಿ ಪ್ರತಿದಿನ ತರಗತಿಗಳು ನಡೆಯಲಿದ್ದು ವಿಸ್ತೃತ ಮತ್ತು ಸರಳವಾದ ಉಪನ್ಯಾಸ ಕಾರ್ಯಕ್ರಮವಿರುತ್ತದೆ.
ತಮ್ಮದೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತರಗತಿಯ ವಿಡಿಯೋಗಳನ್ನು ಎಷ್ಟು ಬಾರಿಯದರೂ ವೀಕ್ಷಿಸಲು ಅವಕಾಶವಿರುತ್ತದೆ. ಇದರ ಜೊತೆಗೆ ಯಾವುದೇ ಸಂಶಯಗಳಿಗೆ ಫೋನ್ ಅಥವಾ ವಾಟ್ಸಾಪ್ ಮೂಲಕವೂ ವಿವರಣೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಾಟ್ಸಾಪ್ ದೂರವಾಣಿ ಸಂಖ್ಯೆಯನ್ನು 9731640407 ಅಥವಾ 9742001857 ದೂರವಾಣಿ ಸಂಖ್ಯೆಗಳಲ್ಲಿ ನೋಂದಾವಣಿ ಮಾಡಿಕೊಂಡು ಇದರ ಪ್ರಯೊಜನವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ಉಚಿತ ತರಗತಿಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.