ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬಕ್ಕೆ ಸಂಭ್ರಮದ ಚಾಲನೆ. ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಕುಕ್ಕೇಟಿ, ಸುಖೇಶ್ ಪದವು, ಜಯಪ್ರಸಾದ್ ಕಾರಿಂಜ, ಕೋಶಾಧ್ಯಕ್ಷ ಹೇಮಂತ್ ಕಾಮತ್, ಪ್ರಧಾನ ಸಂಯೋಜಕ ನ.ಸೀತಾರಾಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ ಸ್ವಾಗತಿಸಿದರು. ಶಾಲಾ ಸಂಚಾಲಕ ಕೆ.ಸುಧಾಕರ ಕಾಮತ್ ಪ್ರಸ್ತಾವನೆಗೈದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…