ಸುಳ್ಯ: ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ನೂತನ ಸಭಾಭವನ ‘ರಜತ ಕಿರಣ’ವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂಬುದು ನಮ್ಮ ಹೆಮ್ಮೆ. ರಾಜ್ಯದ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹವನ್ನು ಏರ್ಪಡಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಒಂದು ಶಾಲೆ 100 ದೇವಾಲಯಕ್ಕೆ ಸಮಾನ. ಸಮಾಜದ ಅಭ್ಯುದಯಕ್ಕಾಗಿ ವಿವೇಕಾನಂದ ವಿದ್ಯಾಸಂಸ್ಥೆಗಳು ದೊಡ್ಡ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿದರೆ ಮಾತ್ರ ಸಾಧನೆ ಮಾಡಬಲ್ಲರು ಎಂಬ ಕಲ್ಪನೆ ಸರಿಯಲ್ಲ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರೂ ದೊಡ್ಡ ಸಾಧನೆ ಮಾಡಿದ್ದಾರೆ ಎಂದರು.
ಸಮಾರೋಪ ಸಂದೇಶ ನೀಡಿದ ಕುಟುಂಬ ಪ್ರಬೋಧನ್ ಅಖಿಲ ಭಾರತ ಸಂಯೋಜಕರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಯಾವ ರೀತಿಯ ಶಿಕ್ಷಣ ನೀಡಬೇಕೋ ಅದನ್ನು ನೀಡದ ಕಾರಣ ಇಂದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕಾದ ಅಗತ್ಯವಿದೆ. ಮನೆ, ಶಾಲೆ, ದೇವಾಲಯ ಮತ್ತು ಸಮಾಜ ನಮಗೆ ಶಿಕ್ಷಣ ನೀಡುವ ಕೇಂದ್ರಗಳು. ಆದುದರಿಂದ ಇದನ್ನು ಬೆಳೆಸಬೇಕು. ಮಕ್ಕಳನ್ನು ತಾಯಿ ತಂದೆ ಪ್ರೀತಿಯಿಂದ ಬೆಳೆಸಬೇಕು. ನಮ್ಮ ಮನೆಯು ದೇವಾಲಯ, ಸೇವಾಲಯ, ಆಧರಾಲಯ ಆದಾಗ ಒಬ್ಬ ಮಗು ಸುಸಂಸ್ಕೃತನಾಗಿ ಬೆಳೆಯುತ್ತಾನೆ ಎಂದು ಅವರು ಹೇಳಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್-ಪದ್ಮಾವತಿ ಕಾಮತ್ ದಂಪತಿಗಳನ್ನು ಸನ್ಮಾನಿಸಲಾಯಿತು.
ಎಂ.ಆರ್.ಪಿ.ಎಲ್ ನ ಮುಖ್ಯ ವ್ಯವಸ್ಥಾಪಕ(ಪ್ರೋಜಕ್ಟ್) ಶ್ರೀರಂಗ, ಸುಳ್ಯದ ಉದ್ಯಮಿ ಕೆ.ಕೃಷ್ಣ ಕಾಮತ್ ಮುಖ್ಯ ಅತಿಥಿಗಳಾಗಿದ್ದರು. ಬೆಳ್ಳಿಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ , ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಕೆ.ಸುಧಾಕರ ಕಾಮತ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ವಂದಿಸಿದರು. ಗಣೇಶ್, ಶಶಿಧರ ಮತ್ತು ಜಯರಾಜ್ ಕುಕ್ಕೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…