ಪುತ್ತೂರು: ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನೊಳಗೊಂಡಂತೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಯಜಮಾನ ಗೇರು ಕಾರ್ಖಾನೆ ಮತ್ತು ಉಪ್ಪಿನಕಾಯಿ ಉತ್ಪಾದನ ಘಟಕ ಹಾಗೂ ಕಲ್ಲಡ್ಕ ಶ್ರೀಕೃಷ್ಣ ಹಂಚಿನ ಕಾರ್ಖಾನೆಗೆ ಒಂದು ದಿನದ ವಾಣಿಜ್ಯ ಕೇಂದ್ರಗಳ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳು ಈ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ವೀಕ್ಷಿಸಿ ಅಧ್ಯಯನ ವರದಿಯನ್ನು ರೂಪಿಸಿದರು. ಈ ಸಂದರ್ಭ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ., ಉಪನ್ಯಾಸಕಿಯರಾದ ಅನನ್ಯಾ ವಿ., ಲಕ್ಷ್ಮಿ ಭಟ್, ಉಪನ್ಯಾಸಕರಾದ ರಾಘವೇಂದ್ರ, ವರ್ಷಿತ್ ಕೆ. ಉಪಸ್ಥಿತರಿದ್ದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…