ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಹಲವಾರು ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅವುಗಳನ್ನು ಸದುಪಯೋಗಪಡಿಸಿಕೊಂಡಾಗ ಮುಂದಿನ ಜೀವನದ ದಾರಿ ತೆರೆದುಕೊಳ್ಳುತ್ತದೆ. ಕಾಲೇಜಿನಲ್ಲಿ ಪಠ್ಯ ವಿಷಯವನ್ನು ಹೊರತು ಪಡಿಸಿ ಇತರ ಚಟುವಟಿಕೆಯನ್ನು ಕಲಿಯುವುದರಿಂದ ಹೊಸ ಅವಕಾಶಗಳನ್ನು ನಾವೇ ರೂಪಿಸಿಕೊಳ್ಳಬಹುದು. ಶಿಕ್ಷಣ ಮುಗಿದ ನಂತರ ಒದಗುವ ಯಾವುದೇ ರೀತಿಯ ಉದ್ಯೋಗವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‍ನ ಕಿರಿಯ ಸಹಾಯಕ ಪವನ್ ನಾಯಕ್ ಬಿ. ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಪಯಣ’ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ಬದುಕಿನಲ್ಲಿ ಯಶಸ್ಸು ಗಳಿಸಲು ಸದಾ ಪ್ರಯತ್ನಿಸುತ್ತಿರಬೇಕು. ನಿರಂತರ ಪ್ರಯತ್ನದಿಂದ ವ್ಯಕ್ತಿತ್ವಕ್ಕೆ ಘನತೆ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿಷಯದ ಕುರಿತು ತಿಳಿದುಕೊಳ್ಳುವ ಜೊತೆಗೆ ಇತರ ವಿಷಯಗಳನ್ನು ಅರಿತುಕೊಂಡರೆ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.
ಮಂಗಳೂರಿನ ಆ್ಯಕ್ಸಿಸ್ ಬ್ಯಾಂಕ್‍ನ ಸೇಲ್ಸ್ ಆಫಿಸರ್ ಸುಶ್ಮಿತಾ ರೈ ಅವರು ಮಾತನಾಡಿ, ಆತ್ಮಸ್ಥೈರ್ಯವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಹಾಗಿದ್ದಾಗ ಮುಂದೆ ವೃತ್ತಿ ಜೀವನವನ್ನು ಆರಂಭಿಸುವಾಗ ಇದು ಸಹಕಾರ ಮಾಡುತ್ತದೆ. ಸಮಾಜವನ್ನು ಅಥವಾ ವೇದಿಕೆಯ ಮುಂದೆ ಬಂದು ಮಾತನಾಡುವ ಕಲೆಯನ್ನು ರೂಢಿಸಿಕೊಳ್ಳಬೇಕು. ಇಂತಹ ಪ್ರಕ್ರಿಯೆಯನ್ನು ವಿದ್ಯಾರ್ಥಿಯಾಗಿದ್ದಾಗಲೇ ಅಭ್ಯಸಿಸಿಕೊಂಡರೆ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರಲ್ಲದೆ ತಮ್ಮ ಜೀವನಾನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಮಾತನಾಡಿ, ಎಂದಿಗೂ ಆಲಸ್ಯದಿಂದಿರದೆ ಹೊಸ ಚಿಂತನೆಯೊಂದಿಗೆ ತಮ್ಮ ದಿನವನ್ನು ಆರಂಭಿಸುವುದು ಉತ್ತಮ. ಯಾವುದೇ ಕಾರಣಕ್ಕೂ ನಾವು ನಮ್ಮತನವನ್ನು ಬಿಟ್ಟುಕೊಡದೆ ಕ್ರಿಯಾಶೀಲತೆಯಿಂದ ತೊಡಗಿಸಿಕೊಳ್ಳಬೇಕು. ಅದೇ ರೀತಿ ಹೊಸ ಸವಾಲುಗಳನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಪ್ರಗತಿ ಸಾಧಿಸಬಹುದು ಎಂದು ಹೇಳಿದರು.
ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗಗಳ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ ಬಿ. ಸ್ವಾಗತಿಸಿದರು. ವಿದ್ಯಾರ್ಥಿನಿ ರಶ್ಮಿ ಬಿ. ವಂದಿಸಿದರು. ವಿದ್ಯಾರ್ಥಿನಿ ಆಶ್ರಿತ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅನನ್ಯಾ ವಿ., ಲಕ್ಷ್ಮೀ ಭಟ್, ರಾಘವೇಂದ್ರ, ವರ್ಷಿತ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…