ಲೀಡ್ಸ್: ಸಂಘಟಿತ ದಾಳಿ ನಡೆಸಿದ ಅಫಘಾನಿಸ್ಥಾನ ಬೌಲರ್ ಗಳ ಬೌಲಿಂಗ್ ಪ್ರದರ್ಶನದ ಮುಂದೆ ಬೆದರಿದ ಪಾಕಿಸ್ಥಾನ ಎರಡು ಬಾಲ್ ಉಳಿದಿರುವಂತೆ ಪ್ರಯಾಸದ ಗೆಲುವು ದಾಖಲಿಸಿದೆ.
ಆಲ್‌ರೌಂಡರ್ ಇಮಾದ್ ವಸೀಂ (ಔಟಾಗದೆ 49)ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಗೆಲುವು ದಾಖಲಿಸಿತು.
ಗೆಲ್ಲಲು 228 ರನ್ ಗುರಿ ಪಡೆದ ಪಾಕಿಸ್ತಾನ 49.4 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗು ಬೀರಿತು.
ಪಾಕ್ 39ನೇ ಓವರ್‌ನಲ್ಲಿ 156 ರನ್‌ಗೆ 6 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿತ್ತು. ಆಗ ತಂಡಕ್ಕೆ ಆಸರೆಯಾದ ವಸೀಂ (ಔಟಾಗದೆ 49)ಶಾದಾಬ್ ಖಾನ್(11) ಅವರೊಂದಿಗೆ 7ನೇ ವಿಕೆಟ್‌ಗೆ 50 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವು ತಂದರು. ಈ ಗೆಲುವಿನೊಂದಿಗೆ ಪಾಕಿಸ್ಥಾನ ಸೆಮಿಫೈನಲ್ ನಿರೀಕ್ಷೆಯನ್ನು ಜೀವಂತವಾಗಿರಿಸಿತು.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…