ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.
ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.
ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.
ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.
90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…