ಸುಳ್ಯ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿರುದ್ದ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಡಿ.4ರಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ -ದುರ್ಗಾವಾಹಿನಿಯ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ, ಸುಳ್ಯ ಪ್ರಖಂಡ ಸಂಯೋಜಕಿ ನಮಿತಾ ರಾವ್, ವಿಹಿಂಪ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ , ವಿಶ್ವ ಹಿಂದೂ ಪರಿಷದ್, ದುರ್ಗಾವಾಹಿನಿ, ಮಾತೃ ಮಂಡಳಿ ಹಾಗು ಭಜರಂಗದಳದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…