Advertisement
ಕೃಷಿ

ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

Share

ಮಂಗಳೂರು: ನಗರದಲ್ಲಿದ್ದರೂ, ಗ್ರಾಮೀಣದಲ್ಲಿದ್ದರೂ ತರಕಾರಿ ಹಾಗೂ ಆಹಾರವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಇವುಗಳಿಗೆ ಮೂಲ ಆಧಾರವಾಗಿರುವುದು ಕೃಷಿ. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯು ಮಾಯವಾಗಿ ನಗರದ ವಿಸ್ತೀರ್ಣ ಹೆಚ್ಚಾಗಿರುವಂತೆಯೇ ಉತ್ತಮ ಜೀವನ ಮಟ್ಟವನ್ನು ನಿರೀಕ್ಷಿಸಿ ಯುವ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತರಕಾರಿಗೆ ಹೆಚ್ಚಿನ ಬೇಡಿಕೆ, ಉತ್ತಮ ಬೆಲೆ ಸಿಗುವುದರಿಂದ ರೈತರು ಹೆಚ್ಚು ಇಳುವರಿ ನೀಡುವ ಸುಧಾರಿತ ಮತ್ತು ಹೈಬ್ರಿಡ್ ತಳಿಗಳನ್ನು ಬೆಳೆಸುತ್ತಿದ್ದಾರೆ. ಈ ತಳಿಗಳು ಶೀಘ್ರವಾಗಿ ಕೀಟ-ರೋಗಕ್ಕೆ ತುತ್ತಾಗುವುದರಿಂದ ನಿವಾರಣೆಗೆ ಅಧಿಕ ಪ್ರಮಾಣದಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಜನರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಗರವಾಸಿಗಳು ಸ್ವಯಂಪ್ರೇರಿತವಾಗಿ ಸಾಧ್ಯವಾದ ಎಲ್ಲಾ ರೀತಿಯ ತರಕಾರಿ ಮತ್ತು ಇತರೆ ಬೆಳೆಗಳನ್ನು ಬೆಳೆಯುವುದೇ ಇದಕ್ಕೆಲ್ಲಾ ಇರುವ ಪರಿಹಾರ.
ಒಂದು ಕುಟುಂಬಕ್ಕೆ ಬೇಕಾಗುವ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ಪಡೆಯಲು ತಮ್ಮ ಮನೆಯ ಆವರಣ-ಹಿತ್ತಲಲ್ಲಿ ಬೆಳೆಸುವ ತೋಟವನ್ನು ಕೈತೋಟ ಎಂದು ಕರೆಯುತ್ತೇವೆ.

ಕೈತೋಟ ಮಾಡಲು ಸ್ಥಳ ಇಲ್ಲದೇ ಇರುವ ಪಕ್ಷದಲ್ಲಿ ಮನೆಯ ತಾರಸಿ ಮೇಲೆ ಕುಂಡಗಳಲ್ಲಿ, ಗ್ರೋಬ್ಯಾಗ್‍ಗಳಲ್ಲಿ ಸುಲಭವಾಗಿ ತರಕಾರಿ ಹಣ್ಣುಗಳನ್ನು ಬೆಳೆಯುವುದೇ ತಾರಸಿ ತೋಟ.

ತಾರಸಿ ತೋಟದ ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬುವ ಮಿಶ್ರಣ ತಯಾರಿಸುವ ವಿಧಾನ ಈ ಕೆಳಕಂಡಿರುತ್ತದೆ. ಮಣ್ಣು, ಮರಳು ಅಥವಾ ಕೋಕೋಪಿಟ್ ಮತ್ತು ಕಾಂಪೋಸ್ಟ್-ಬಯೋಮಿಕ್ಸ್ ಅನ್ನು 1:1:1 ಪ್ರಮಾಣದಲ್ಲಿ ಬೆರೆಸಿ ಮಿಶ್ರಣ ಮಾಡಿಕೊಳ್ಳುವುದು. ಈ ಮಿಶ್ರಣವನ್ನು ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬಿಸಿ ಬೀಜಗಳನ್ನು ಅಥವಾ ಸಸಿಗಳನ್ನು ನಾಟಿ ಮಾಡಿ, ದಿನಾಲೂ ನೀರು ಹಾಕುವುದು. ಬಳ್ಳಿಗಳು ಇರುವ ತರಕಾರಿಗೆ ಚೆನ್ನಾಗಿ ಹರಡಿಕೊಳ್ಳಲು ಆಧಾರಕೋಲು ಕೊಡುವುದು.

ಕೈತೋಟ ಮತ್ತು ತಾರಸಿ ತೋಟ ಬೆಳೆಸುವಾಗ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಮಹತ್ವನ್ನು ನೀಡಿ ಹಾನಿಕಾರಕ ರಾಸಾಯನಿಕಗಳನ್ನು ಬಳಸದೇ ತೋಟವನ್ನು ಮಾಡಬೇಕಾಗುವುದು.
ಮುಖ್ಯವಾಗಿ ತರಕಾರಿ ಬೆಳೆಯುವಾಗ ಗಮನದಲ್ಲಿ ಇರಬೇಕಾದ ಅಂಶಗಳೇನೆಂದರೆ ಗಿಡಗಳಿಗೆ ಅಗತ್ಯಕ್ಕಿಂತ ಜಾಸ್ತಿ ನೀರು ಕೊಡಬಾರದು, ಗಿಡಗಳಿಗೆ ಸಾಧ್ಯವಾದಷ್ಟು ಬಿಸಿಲು ಬೀಳುವಂತೆ ನೋಡಿಕೊಳ್ಳಬೇಕು, ತರಕಾರಿ ಗಿಡಗಳಲ್ಲಿ ರೋಗದ ಲಕ್ಷಣ ಪ್ರಥಮ ಬಾರಿಗೆ ಕಂಡ ಕೂಡಲೇ ಅದನ್ನು ಅಲ್ಲಿಂದ ದೂರಕ್ಕೆ ಸ್ಥಳಾಂತರಿಸಬೇಕು ಹಾಗೂ ಬೇವಿನ ಸತ್ವದ ದ್ರಾವಣವನ್ನು ಬಳಸಿ ಪೀಡೆ ನಿವಾರಣೆಗೆ ಆದ್ಯತೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್ ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

18 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

19 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

19 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

19 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago