ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…