ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.
ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel