ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…