ಮ್ಯಾಂಚೆಸ್ಟರ್: ವಿಶ್ವಕಪ್ನಲ್ಲಿ ಸ್ಥಿರ ನಿರ್ವಹಣೆಯೊಂದಿಗೆ ಅಜೇಯವಾಗಿ ಉಳಿದಿರುವ ಟೀಂ ಇಂಡಿಯಾ ತನ್ನ ಜಯದ ಓಟವನ್ನು ಮುಂದುವರಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ 125 ರನ್ಗಳ ಭರ್ಜರಿ ಜಯ ದಾಖಲಿಸಿದೆ.
ಭಾರತ ನೀಡಿದ 269 ರನ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 34.2 ಓವರ್ಗಳಲ್ಲಿ 143 ರನ್ಗಳಿಗೆ ಆಲೌಟಾಯಿತು. ಈ ಮೂಲಕ ಸತತ 3 ನೇ ಸೋಲು ಕಂಡಿತು.
ಭಾರತ ನೀಡಿದ್ದ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 16 ರನ್ ಗಳಿಸುವಷ್ಟರಲ್ಲಿ ಕ್ರಿಸ್ ಗೇಲ್ (6) ಮತ್ತು ಶಾಯ್ ಹೋಪ್ (5) ವಿಕೆಟ್ ಕಳೆದುಕೊಂಡಿತು. ನಂತರ ಜತೆಯಾದ ಆಂಬ್ರಿಸ್ (31) ಮತ್ತು ಪೋರನ್ (28) ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಇವರಿಬ್ಬರು ಔಟಾದ ನಂತರ ವೆಸ್ಟ್ ಇಂಡೀಸ್ನ ಮಧ್ಯಮ ಕ್ರಮಾಂಕ ಮತ್ತು ಕೆಳ ಕ್ರಮಾಂಕದ ಆಟಗಾರರು ಬೇಗ ಔಟಾಗುವ ಮೂಲಕ ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲನುಭವಿಸಿತು.
ಭಾರತದ ಪರ ಮೊಹಮದ್ ಶಮಿ 4, ಬುಮ್ರಾ, ಚಾಹಲ್ ತಲಾ 2 ವಿಕೆಟ್ ಮತ್ತು ಪಾಂಡ್ಯ, ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ (72) ಮತ್ತು ಎಂ.ಎಸ್. ಧೋನಿ (56*) ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 268 ರನ್ ಗಳಿಸಿತು.
ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ರೋಹಿತ್ ಶರ್ಮ (18) ರನ್ ಗಳಿಸಿ ಔಟಾದರು. ನಂತರ ಕೆ.ಎಲ್. ರಾಹುಲ್ ಜತೆಯಾದ ಕೊಹ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಅರ್ಧಶತಕ ವಂಚಿತರಾದ ರಾಹುಲ್ 48 ರನ್ ಗಳಿಸಿ ಔಟಾದರು. ರಾಹುಲ್ ಔಟಾದ ಬಳಿಕ ಬಂದ ವಿಜಯ್ ಶಂಕರ್ (14) ಮತ್ತು ಕೇದಾರ್ ಜಾಧವ್ (7) ರನ್ ಗಳಿಸಿ ಔಟಾದರು. ಈ ಹಂತದಲ್ಲಿ ಜತೆಯಾದ ಧೋನಿ ಮತ್ತು ಹಾರ್ದಿಕ್ ಪಾಂಡ್ಯ (46) ಉತ್ತಮ ಜತೆಯಾಟವಾಡಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.
ವೆಸ್ಟ್ ಇಂಡೀಸ್ ಪರ ಕೇಮರ್ ರೋಚ್ 3, ಕಾಟ್ರೆಲ್ ಮತ್ತು ಹೋಲ್ಡರ್ ತಲಾ 2 ವಿಕೆಟ್ ಪಡೆದರು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490