ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ಶಾಖೆಯಲ್ಲಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ನ.9 ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಹೊರರೋಗಿ ವಿಭಾಗದಲ್ಲಿ ತಪಾಸಣೆ ನಡೆಸಲಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆಯ ಅಧ್ಯಕ್ಷ ಡಾ.ಬಿ.ಎನ್. ಶ್ರೀಕೃಷ್ಣ ಅವರು ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…