ವೈದ್ಯರ ಮುಷ್ಕರ : ಸುಳ್ಯದಲ್ಲೂ ಸೇವೆ ಕಡಿತ

June 17, 2019
5:49 PM

ಸುಳ್ಯ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಸುಳ್ಯದಲ್ಲಿಯೂ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸುಳ್ಯದಲ್ಲಿ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್‍ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತಗೊಂಡಿತ್ತು. ತುರ್ತು ಚಿಕಿತ್ಸಾ ವಿಭಾಗ ಮಾತ್ರ ಕಾರ್ಯಾಚರಿಸಿದ್ದು ತುರ್ತು ಚಿಕಿತ್ಸೆಗಳನ್ನು ಮಾತ್ರ ವೈದ್ಯರುಗಳು ನೀಡಿದ್ದರು. ಖಾಸಗೀ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್‍ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತವಾದ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ರಶ್ ಕಂಡು ಬಂದಿತ್ತು. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ದಿನಕ್ಕಿಂತ ಹೆಚ್ಚು ರೋಗಿಗಳು ಆಗಮಿಸಿದ್ದರು ಎಂದು ತಾಲೂಕು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror