ಸುಳ್ಯ: ಪಶ್ಚಿಮ ಬಂಗಾಲದಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿಯೂ ಖಾಸಗೀ ಆಸ್ಪತ್ರೆಗಳ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ.
ಜೂನ್ 17ರಂದು ಬೆಳಗ್ಗೆ 6 ರಿಂದ ಜೂನ್ 18ರ ಬೆಳಗ್ಗೆ 6 ಗಂ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಹೊರ ರೋಗಿ ವಿಭಾಗ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ. ತುರ್ತು ವಿಭಾಗ ಕಾರ್ಯನಿರ್ವಹಿಸುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗದು ಎಂದು ಹೇಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಅಡಚಣೆ ಆಗದು. ವೈದ್ಯರು, ಶುಶ್ರೂಷಕರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಅಡಚಣೆಯಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರು, ಸಿಬ್ಬಂದಿ ಹಾಜರಾಗುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…