ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ಖಂಡಿಸಿ ನಾಳೆ(ನ.8, ಶುಕ್ರವಾರ) ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಒಪಿಡಿ ಬಂದ್ ನಡೆಸಿ ಮುಷ್ಕರ ನಡೆಯಲಿದೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ, ಫನಾ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ಹೀಗಾಗಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ಒಪಿಡಿ ಬಂದ್ ಮಾಡಲು ಐಎಂಎ ಕರೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …