ಸುಳ್ಯ: ಜ್ಞಾನದ ಬೆಳಕು ನೀಡುವವನು ಗುರು. ಗುರು ಸೃಷ್ಟಿಕರ್ತ, ಪಾಲನಕರ್ತ, ಲಯ ಕರ್ತನಿಗೆ ಸಮಾನ. ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು.
ಅವರು ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರ ವ್ಯಕ್ತಿತ್ವ ರೂಪಿಸುವ ಶಿಲ್ಪಿಯಾಗಿ ಸಮಾಜದಲ್ಲಿ ಶ್ರೇಷ್ಠನೆನಿಸುವನು. ಅಂತಹ ಗುರುವಿನ ಬಗ್ಗೆ ಅಲ್ಪವಾಗಿ ಮಾತನಾಡದೆ ಗೌರವದಿಂದ ಕಾಣಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ, ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಉಪಸ್ಥಿತರದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel