ವ್ಯಸನದಿಂದ ಒಂದು ಕುಟುಂಬ ನಾಶವಾದರೆ, ಅದು ನನ್ನ ಕುಟುಂಬ ಹಾಳಾದಷ್ಟೇ ನೋವು ಕೊಡುತ್ತದೆ- ಶಾಸಕ ಅಂಗಾರ

October 2, 2019
8:46 PM

ಸುಳ್ಯ: ಮದ್ಯದಿಂದ ಮತ್ತು ಇತರ ವ್ಯಸನದಿಂದ ಒಂದು ಕುಟುಂಬ ನಾಶವಾದರೆ ಅದು ನನ್ನ ಕುಟುಂಬ ಹಾಳಾದಷ್ಟೇ ನೋವು ಕೊಡುತ್ತದೆ. ಆದುದರಿಂದ ಸಮಾಜದ ನೋವನ್ನು ಹೋಗಲಾಡಿಸಲು ಎಲ್ಲರೂ ವ್ಯಸನದಿಂದ ಮುಕ್ತರಾಗಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement
Advertisement
Advertisement

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆದ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಮತ್ತು ವ್ಯಸನಮುಕ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ವ್ಯಸನ ಮುಕ್ತ ಸಮಾಜದ ಕಲ್ಪನೆ ಮಹಾತ್ಮಾ ಗಾಂಧೀಜಿಯವರಿಗೆ ಇತ್ತು. ಆದರೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ವ್ಯಸನ ಮುಕ್ತ ಸಮಾಜ ಮಾಡಲು ಸಾಧ್ಯವಾಗಿಲ್ಲ. ಇದನ್ನು ಸರಕಾರಗಳು ಮಾಡಬೇಕಿತ್ತು. ಆದರೆ ಅಧಿಕಾರಕ್ಕೆ ಮತ್ತು ಹಣಕ್ಕೆ ಹೆಚ್ಚು ಒತ್ತು ನೀಡುವುದರಿಂದ ಸಂಪೂರ್ಣ ಮದ್ಯಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗಿಲ್ಲ. ನಾವು ಗಟ್ಟಿಯಾಗಿದ್ದರೆ ನಮ್ಮನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ವ್ಯಸನಗಳ ವಿರುದ್ಧ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಜಾಗೃತಿ ಮೂಡಿಸುತಿದೆ. ಆ ಜಾಗೃತಿ ನಮ್ಮ ಮನಸಿನಲ್ಲಿ ಸದಾ ಇರಬೇಕು ಎಂದು ಅವರು ಹೇಳಿದರು.

Advertisement

ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಪರಿವಾರಕಾನ ಮದರ್ ತೆರೇಸಾ ಚರ್ಚ್ ನ ಫಾದರ್ ಜೋಸೆಫ್ ಪೂದಕುಯಿ, ಪಂಜ ನೆಕ್ಕಿಲ ತಾಜುಲ್ ಹುದಾ ಎಜ್ಯುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ನೂರುದ್ದೀನ್ ಝುಹರಿ, ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಜನಾರ್ಧನ ಉಬರಡ್ಕ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

ಸಮಾವೇಶದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ಹಮ್ಮಿಕೊಳ್ಳಲಾಗಿತ್ತು. ಪಾನಮುಕ್ತ ತಾಲೂಕಿಗೆ ಹಕ್ಕೊತ್ತಾಯ ನಿರ್ಣಯವನ್ನು ಕೈಗೊಂಡು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಗಾಂಧಿ ಜಯಂತಿ ಅಂಗವಾಗಿ ಜನಜಾಗೃತಿ ದ ಮತ್ತು ಯೋಜನೆಯ ವತಿಯಿಂದ ಬೆಳಿಗ್ಗೆ 151 ಕಡೆ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ
ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror