ಶಂಕಿತ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ಕೋರ್ಟ್‍ಗೆ ಹಾಜರು : ಆ.9 ಕ್ಕೆ ವಿಚಾರಣೆ ಮುಂದೂಡಿಕೆ

July 24, 2019
10:00 AM

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಇದೀಗ 8ನೇ ಬಾರಿಗೆ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಇಂದು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ ರೂಪೇಶ್, ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಬಾರಿ ಜಿಂದಾಬಾದ್ ಎಂದು ಘೋಷಣೆ ಕೂಗಿ ನ್ಯಾಯಾಲಯ ಆವರಣ ಪ್ರವೇಶಿಸಿದ. ಬಳಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ.ವಿ.ಮಲ್ಲಾಪುರ ಅವರ ಎದುರು ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಹಾಜರುಪಡಿಸಲಾಯಿತು.
ಪ್ರಕರಣದ ಕುರಿತು ಪರ-ವಿರೋಧ ವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಆ.9ಕ್ಕೆ ಮುಂದೂಡಿದರು.
ರಾಜ್ಯ ಗುಪ್ತ ದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.
ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror