ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಇದೀಗ 8ನೇ ಬಾರಿಗೆ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಇಂದು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ ರೂಪೇಶ್, ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಬಾರಿ ಜಿಂದಾಬಾದ್ ಎಂದು ಘೋಷಣೆ ಕೂಗಿ ನ್ಯಾಯಾಲಯ ಆವರಣ ಪ್ರವೇಶಿಸಿದ. ಬಳಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ.ವಿ.ಮಲ್ಲಾಪುರ ಅವರ ಎದುರು ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಹಾಜರುಪಡಿಸಲಾಯಿತು.
ಪ್ರಕರಣದ ಕುರಿತು ಪರ-ವಿರೋಧ ವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಆ.9ಕ್ಕೆ ಮುಂದೂಡಿದರು.
ರಾಜ್ಯ ಗುಪ್ತ ದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.
ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…