Advertisement
ಸುದ್ದಿಗಳು

ಶಂಕು ಹುಳುಗಳು – ನಿರ್ವಹಣೆ ಕ್ರಮ

Share

ಮಂಗಳೂರು : ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ ಮಾಡುತ್ತವೆ. ಕೆಲವೊಮ್ಮೆ ತುಂತುರು ಮಳೆ ಹಾಗೂ ಮಂದ ಸೂರ್ಯನ ಪ್ರಕಾಶದಲ್ಲಿ ಹಗಲಿನ ವೇಳೆಯಲ್ಲೂ ಇವುಗಳ ಬಾಧೆಯನ್ನು ಕಾಣಬಹುದು.

ನಿರ್ವಹಣೆ ಕ್ರಮ : ತೋಟದಲ್ಲಿ ಕಳೆಗಿಡಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡುವುದು. ಪ್ರಾರಂಭದ ಹಂತಗಳಲ್ಲಿ ಹುಳುಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಸುಣ್ಣ ಸಿಂಪಡಿಸುವುದರಿಂದ ನಾಶಪಡಿಸಬಹುದು. ಹಸಿ ಗೋಣಿ ಚೀಲಗಳನ್ನು ತೋಟದಲ್ಲಿ ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಹೀಗೆ ಸಂಗ್ರಹಿಸಿದ ಹುಳುಗಳನ್ನು ಉಪ್ಪು ಅಥವಾ ಕಾಪರ್ ಸಲ್ಫೇಟ್ ಹಾಕಿ ನಾಶಪಡಿಸಬಹುದು.

ರಾಸಾಯನಿಕವಾಗಿ : ಮೆಟಾಲ್ಡಿಹೈಡ್ ರಾಸಾಯನಿಕ ಪೀಡೆನಾಶಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಆಕರ್ಷಣೆಗೊಂಡು ಕೀಟನಾಶಕಗಳನ್ನು ತಿನ್ನುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.
ವಿಶೇಷ ಸೂಚನೆ : ಯಾವುದೇ ರಾಸಾಯನಿಕದಿಂದ ಈ ಹುಳುಗಳು ಸತ್ತಿದ್ದು ಕಂಡುಬಂದಲ್ಲಿ ತಕ್ಷಣ ಅವುಗಳನ್ನು ಆರಿಸಿ ಆಳವಾಗಿ ನೆಲದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕು ಪ್ರಾಣಿಗಳು ಹೀಗೆ ಸತ್ತಿರುವ ಶಂಕುಹುಳುಗಳನ್ನು ತಿನ್ನುವುದರಿಂದ ಅವುಗಳಿಗೆ ತೊಂದರೆಯಾಗಬಹುದು. ಶಂಕುಹುಳಗಳು ನಿಸರ್ಗದಲ್ಲಿ ಶೇ.75 ರಿಂದ 80 ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದಲ್ಲಿ ಸಮತೋಲನವನ್ನು ಕಾಪಾಡುತ್ತವೆ. ಇಂತಹ ಸಂದರ್ಭದಲ್ಲಿ ಬೆಳೆಗಳ ಮೇಲೆ ಹಾವಳಿಯಿದ್ದಾಗಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನವನ್ನು ಕಾಪಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಿಶಲ್ ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

13 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

13 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago