ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.
Advertisement
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ನಗರದಲ್ಲಂತೂ 4 ಸಾವಿರಕ್ಕೂ ಹೆಚ್ಚು ಅರೆಮಿಲಿಟರಿ ಪಡೆ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.ಅಗತ್ಯಬಿದ್ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆಗೆ ರವಾನಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
Advertisement
ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾಲ ಸನ್ನಿಹಿತವಾಗುತ್ತಿರುವಂತೆ ಸಂಭ್ರಮಾಚರಣೆಯ ಹೆಸರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ಎಚ್ಚರವಹಿಸಬೇಕು ಎಂದು ದೇಶದ ವಿವಿಧ ಮಠಗಳ ಸ್ವಾಮೀಜಿಗಳು, ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement