ಶಬರಿಮಲೆ: ದೇಶದ ಭಕ್ತರ ನಂಬಿಕೆಯ, ಶ್ರದ್ಧೆಯ ತಾಣವಾದ ಶಬರಿಮಲೆ ಯಾತ್ರೆಗೆ ಈಗ ಭಕ್ತರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಮಹಿಳಾ ಪ್ರವೇಶದ ವಿವಾದದ ಕಾರಣದಿಂದ ಸಂಕಲ್ಪ ಕೈಗೊಂಡು ಯಾತ್ರೆ ಮಾಡಲಾಗದ ಭಕ್ತರು ತಮ್ಮ ಶ್ರದ್ಧೆ, ನಂಬಿಕೆಯ ತಾಣಕ್ಕೆ ಈಗ ಭೇಟಿಗೆ ಆರಂಭಿಸಿದ್ದಾರೆ. ಹೀಗಾಗಿ ದೇವಳದ ಆದಾಯವೂ ಹೆಚ್ಚಿದ್ದು ದಿನಕ್ಕೆ 3.30 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗುತ್ತಿದೆ. ಶನಿವಾರ ಮಂಡಲ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿತ್ತು. ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.
ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಮಾಹಿತಿ ನೀಡಿ, “ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೊದಲ ದಿನ ಕಾಣಿಕೆ ರೂಪದಲ್ಲಿ 3.32 ಕೋಟಿ ಆದಾಯ ದೇಗುಲಕ್ಕೆ ಬಂದಿದೆ. ಕಳೆದ ವರ್ಷ 2.04 ಕೋಟಿ ಆದಾಯ ಸಂಗ್ರಹವಾಗಿತ್ತು ಎಂದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಸಂಗ್ರಹವಾಗಿರುವ ಆದಾಯ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಷ ತೀರ್ಥಯಾತ್ರೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಭಕ್ತಾದಿಗಳಿಗೆ ಹೆಚ್ಚಿನ ವ್ಯವಸ್ಥೆ ಮಾಡಲು ದೇವಸ್ವಂ ಬೋರ್ಡ್ ಪ್ರಯತ್ನ ಮಾಡುತ್ತಿದೆ ಎಂದರು.
ಕಳೆದ ವರ್ಷ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯ ಸರಕಾರ ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ವರ್ಷ ಮಹಿಳೆಯರಿಗೆ ಯಾವುದೇ ನಿರ್ಬಂಧ ಇಲ್ಲದ ಕಾರಣ ವಿವಾದಗಳಿಲ್ಲದೆ ಯಾತ್ರೆ ನಡೆಯುತ್ತಿದೆ.
( ಮೂಲ: ಸುದ್ದಿ ಜಾಲ)
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…