ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

November 14, 2019
11:38 AM

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

Advertisement

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group