ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್ ಸಿಜೆಐ ದೀಪಕ್ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್ ಹಾಗೂ ನ್ಯಾ.ಚಂದ್ರಚೂಡ್ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.
ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.
ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್ ಗೊಗೊಯ್ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…