ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…