ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆ

October 15, 2019
9:00 AM
tobacco

ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.

Advertisement
Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ  ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.

Advertisement

ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಸಭೆಯಲ್ಲಿ  ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror