ಶಾಲಾ ಸಂಸತ್ತು ಉದ್ಘಾಟನೆ ಹಾಗು ಉಚಿತ ಪುಸ್ತಕ ವಿತರಣೆ

June 23, 2019
8:53 PM

ಸುಳ್ಯ: ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ಶಾಲಾ ಸಂಸತ್ತು ಉದ್ಘಾಟನೆ ಹಾಗು ಶಿಕ್ಷಕರ ಬಳಗ ಕೋಲಾರ ಇವರು ನೀಡಿರುವ ನಲುವತ್ತೈದು ಸಾವಿರ ಮೌಲ್ಯದ ಪುಸ್ತಕ ಹಾಗೂ ಲೇಖನಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

Advertisement

ಶಾಲಾ ಸಂಸತ್ತು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಮಾತನಾ‌ಡಿ ಪ್ರಜಾಪ್ರಭುತ್ವದ ಮೌಲ್ಯವನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿತರೆ ದೇಶವು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು. ಶಾಲೆಗೆ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು.
ಶಿಕ್ಷಕರ ಬಳಗ ಕೋಲಾರ ನೀಡಿರುವ ಪುಸ್ತಕಗಳನ್ನು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ ಎರ್ಮೆಟ್ಟಿ ವಿತರಿಸಿದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ ಪುರುಷೊತ್ತಮ ಕಜೆ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಭೋಜಪ್ಪ ಗೌಡ, ಚಂದ್ರಶೇಖರ, ಪೂರ್ವ ವಿಧ್ಯಾರ್ಥಿ ವಿನ್ಯಾಸ್ ಹೊನ್ನೆಡಿ, ವಿದ್ಯಾರ್ಥಿ  ನಾಯಕರಾದ ಸಂಪತ್ ಹಾಗು ಭರತ ಕುಮಾರ್ ಉಪಸ್ತಿತರಿದ್ದರು. ವಿದ್ಯಾರ್ಥಿಗಳಿಗೆ ವಸಂತ ನಾಯಕ್ ಪ್ರಮಾಣ ವಚನ ಭೋದಿಸಿದರು.

ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೆರಾಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ವಿರೂಪಾಕ್ಷಪ್ಪ ವಂದಿಸಿದರು. ಶಾಲಾ ಅಧ್ಯಾಪಕರಾದ ತಿರುಮಲೇಶ್ವರಿ. ಮುರಲೀಧರ, ರಾಜೇಶ್ವರಿ, ಶಶಿಕಲಾ ಇವರು ಸಹಕರಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group