ಸುಳ್ಯ: ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ಶಾಲಾ ಸಂಸತ್ತು ಉದ್ಘಾಟನೆ ಹಾಗು ಶಿಕ್ಷಕರ ಬಳಗ ಕೋಲಾರ ಇವರು ನೀಡಿರುವ ನಲುವತ್ತೈದು ಸಾವಿರ ಮೌಲ್ಯದ ಪುಸ್ತಕ ಹಾಗೂ ಲೇಖನಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ಶಾಲಾ ಸಂಸತ್ತು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಪ್ರಜಾಪ್ರಭುತ್ವದ ಮೌಲ್ಯವನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿತರೆ ದೇಶವು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು. ಶಾಲೆಗೆ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು.
ಶಿಕ್ಷಕರ ಬಳಗ ಕೋಲಾರ ನೀಡಿರುವ ಪುಸ್ತಕಗಳನ್ನು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ ಎರ್ಮೆಟ್ಟಿ ವಿತರಿಸಿದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ ಪುರುಷೊತ್ತಮ ಕಜೆ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಭೋಜಪ್ಪ ಗೌಡ, ಚಂದ್ರಶೇಖರ, ಪೂರ್ವ ವಿಧ್ಯಾರ್ಥಿ ವಿನ್ಯಾಸ್ ಹೊನ್ನೆಡಿ, ವಿದ್ಯಾರ್ಥಿ ನಾಯಕರಾದ ಸಂಪತ್ ಹಾಗು ಭರತ ಕುಮಾರ್ ಉಪಸ್ತಿತರಿದ್ದರು. ವಿದ್ಯಾರ್ಥಿಗಳಿಗೆ ವಸಂತ ನಾಯಕ್ ಪ್ರಮಾಣ ವಚನ ಭೋದಿಸಿದರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೆರಾಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ವಿರೂಪಾಕ್ಷಪ್ಪ ವಂದಿಸಿದರು. ಶಾಲಾ ಅಧ್ಯಾಪಕರಾದ ತಿರುಮಲೇಶ್ವರಿ. ಮುರಲೀಧರ, ರಾಜೇಶ್ವರಿ, ಶಶಿಕಲಾ ಇವರು ಸಹಕರಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…