ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೇರಳದಲ್ಲಿ ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.
ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.
ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ, ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.
ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…