ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…