ಮಂಡ್ಯ: ಕೊರೋನಾ ಭೀತಿ ನಡುವೆಯೂ ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭಿಸಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಹು ಮುಖ್ಯ ಆದ್ಯತೆ ಅಂದರೆ ಅದು ನಮ್ಮ ಮಕ್ಕಳ ಆರೋಗ್ಯ. ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬುದನ್ನೂ ಹೇಳುತ್ತಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಕಾಲದಲ್ಲಿ ನಮ್ಮ ಮಕ್ಕಳು ಯಾವುದೇ ಕಾರಣಕ್ಕೂ ಕೊರೋನಾ ಭೀತಿಗೆ ಒಳಗಾಗಬಾರದು. ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಇನ್ನು ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆಯಿಂದ ಸಮಾಜಕ್ಕೆ ಭರವಸೆ ನೀಡುವ ಕಾರ್ಯವಾಗ್ತಿದೆ ಎಂದು ಮಾಹಿತಿ ನೀಡಿದರು.
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…