Advertisement
ಸುದ್ದಿಗಳು

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

Share

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಹಾಗೂ ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡ ಪ್ರಶ್ನಿಸಿದ್ದಾರೆ.

Advertisement
Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಡವಳಿಕೆ ಸಂವಿಧಾನದ ಕಗ್ಗೊಲೆ. ಮುಂದೆ ಇದರ ಪರಿಣಾಮ ಗೊತ್ತಾಗುತ್ತದೆ. ಹೀಗೆ ವಾಮಮಾರ್ಗದಲ್ಲಿ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಹಿಡಿಯಲು ಪ್ರಯತ್ನಿಸಿದರೆ ಜನ ದಂಗೆ ಏಳುವ ಸ್ಥಿತಿ ಬರಬಹುದು.  ಬಿಜೆಪಿ ಕುದುರೆ ವ್ಯಾಪಾರದ ಮೂಲಕ ಶಾಸಕರನ್ನು ಖರೀದಿ ಮಾಡಿದೆ. ಅದು ಸರಿ ಎಂದಾದರೆ ಇಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪರ ಮತ ಚಲಾಯಿಸಿದವರ ಮೇಲೆ ಯಾಕೆ ಕ್ರಮ ಕೈಗೊಂಡಿದ್ದಾರೆ. ಯಾಕೆ ಅಂತವರನ್ನು ಬಲಾತ್ಕಾರದಿಂದ ರಾಜೀನಾಮೆ ಕೊಡಿಸಿದಿರಿ ಎಂಬುದಕ್ಕೆ ಬಿಜೆಪಿ ನಾಯಕರು ಉತ್ತರಿಸಬೇಕು. ಸುಳ್ಯ ನ.ಪಂ.ನಲ್ಲಿ ನಾವು 4 ಸ್ಥಾನ ಗೆದ್ದಿದ್ದೇವೆ. 2 ಮಂದಿ ಪಕ್ಷೇತರರು ನಮ್ಮ ಜೊತೆಗಿದ್ದಾರೆ. ನಾವು ಅಧಿಕಾರ ನಡೆಸುತ್ತೇವೆ ಎಂದು ಬಿಜೆಪಿಯವರಿಗೆ ಆಹ್ವಾನ ಕೊಟ್ಟರೆ ಅವರ ಸದಸ್ಯರು ಬರುತ್ತಾರೆಯೇ, ಅದು ಸರಿ ಕಾಣುತ್ತದೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಪರವಾಗಿ ನಿಂತ ನಾಯಕ. ಅವರ ಸಾಲಮನ್ನಾ ಯೋಜನೆ ರೈತರಿಗೆ ಮುಟ್ಟಿದೆ. 1ಲಕ್ಷ ಸಾಲ ಮನ್ನಾ ಪಡೆದ ನಾಯಕರೊಬ್ಬರ ಮಗನೇ ನಿನ್ನೆ ಮುಖ್ಯಮಂತ್ರಿ ಸೋತ ಹಿನ್ನಲೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಇಂಥವರಿಗೆ ಕನಿಷ್ಟ ಕೃತಜ್ಞತೆ ಭಾವನೆಯಾದರೂ ಬೇಡವೇ ಎಂದು ಪ್ರಶ್ನಿಸಿದರು.
ಸಂವಿಧಾನದ ಎಲ್ಲ ಅಂಗಗಳನ್ನು ಕೇಂದ್ರ ಸರ್ಕಾರ ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಖರೀದಿಯಾದ ಶಾಸಕರು ಮರಳಿ ಬಂದರೂ ಕಾಂಗ್ರೆಸ್ ಅವರಿಗೆ ಪ್ರವೇಶ ನೀಡದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಧರ್ಮಪಾಲ ಕೊಯಿಂಗಾಜೆ, ಮಹಮ್ಮದ್ ಪವಾಝ್ ಕನಕಮಜಲು , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

4 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago