ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಬಿಜೆಪಿಯಲ್ಲಿ ರಾಜಿನಾಮೆ ಪರ್ವ ಆರಂಭಗೊಂಡಿದೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖರ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿಯಿಂದ ಆರಿಸಿ ಬಂದ ಜನಪ್ರತಿಗಳು, ಪಕ್ಷದ ಜವಾಬ್ದಾರಿ ಇರುವ ಮುಖಂಡರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ಸಹಕಾರಿ ಸಂಘಗಳ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಮಂದಿ ತಮ್ಮ ರಾಜಿನಾಮೆಯನ್ನು ಘೋಷಿಸಿ ರಾಜಿನಾಮೆ ಪತ್ರವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳು, ಪಕ್ಷದ ನಾಯಕರು ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…