ಶಾಸಕರಿಗೆ ಸಚಿವ ಸ್ಥಾನ – ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ

August 24, 2019
3:42 PM

ಸುಳ್ಯ:ಶಾಸಕ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿಗೆ ನಿಯೋಗ ತೆರಳಲು ನಿರ್ಧರಿಸಲಾಗಿದೆ.

Advertisement
Advertisement

ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿದ ಕಾರಣ ತೀವ್ರ ಆಕ್ರೋಶ ಉಂಟಾಗಿರುವ ಮತ್ತು ಬಿಜೆಪಿ ಅಸಹಕಾರ ಚಳವಳಿ ಘೋಷಿಸಿರುವ ಹಿನ್ನಲೆಯಲ್ಲಿ
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ವಿಧಾ‌ನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರಣಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ಸುಳ್ಯ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು.
ಸುಳ್ಯದ ಸಂಘಟನೆ ಹಾಗೂ ಕಾರ್ಯಕರ್ತರ ಆಗ್ರಹವನ್ನು ಪರಿಗಣಿಸಿ ಅತಿ ಶೀಘ್ರವಾಗಿ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಸುಳ್ಯದ ಬಿಜೆಪಿಯ ಪ್ರಮುಖರ ನಿಯೋಗವು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಲು ತೀರ್ಮಾನಿಸಲಾಯಿತು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ. ಎಸ್.ಎನ್.ಮನ್ಮಥ, ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror