ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿಗೆ ನಿಯೋಗ ತೆರಳಲು ನಿರ್ಧರಿಸಲಾಗಿದೆ.
ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿದ ಕಾರಣ ತೀವ್ರ ಆಕ್ರೋಶ ಉಂಟಾಗಿರುವ ಮತ್ತು ಬಿಜೆಪಿ ಅಸಹಕಾರ ಚಳವಳಿ ಘೋಷಿಸಿರುವ ಹಿನ್ನಲೆಯಲ್ಲಿ
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರಣಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ಸುಳ್ಯ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು.
ಸುಳ್ಯದ ಸಂಘಟನೆ ಹಾಗೂ ಕಾರ್ಯಕರ್ತರ ಆಗ್ರಹವನ್ನು ಪರಿಗಣಿಸಿ ಅತಿ ಶೀಘ್ರವಾಗಿ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಸುಳ್ಯದ ಬಿಜೆಪಿಯ ಪ್ರಮುಖರ ನಿಯೋಗವು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಲು ತೀರ್ಮಾನಿಸಲಾಯಿತು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ. ಎಸ್.ಎನ್.ಮನ್ಮಥ, ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…