ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…