ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಎಸ್.ಅಂಗಾರ ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆರು ಬಾರಿ ಗೆದ್ದಿರುವ ಸರಳ ಸಜ್ಜನ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯೂ ಆಗಿತ್ತು. ಆದರೆ ಕಾರಣಾಂತರಗಳಿಂದ ಈ ಬಾರಿ ತಪ್ಪಿ ಹೋಗಿದೆ. ಮುಂದೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ದೊರೆಯುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಶನಿವಾರ ಸುಳ್ಯಕ್ಕೆ ಆಗಮಿಸಿ ಶಾಸಕ ಎಸ್.ಅಂಗಾರ ಮತ್ತು ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ತಮ್ಮನ್ನು ಸಂಪರ್ಕಿಸಿದ ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಸಂಜೀವ ಮಠಂದೂರು ಮುಂದಿನ ದಿನಗಳಲ್ಲಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದ್ದು ಹಿರಿಯ ಶಾಸಕರಾದ ಅಂಗಾರರು ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಬಿಜೆಪಿ ಪ್ರಮುಖರ ನಿಯೋಗ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…