ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ತನ್ನ ಆಶಯ ವ್ಯಕ್ತಪಡಿಸಿದ್ದಾರೆ.
ಸುಳ್ಯ ಪತ್ರಕರ್ತರಿಗೆ ಪತ್ರಿಕಾ ಹೇಳಿಕೆ ನೀಡಿರುವ ವೆಂಕಟ್ ದಂಬೆಕೋಡಿ ಅವರು, ಜಿಲ್ಲೆಯಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಳೆದ 25 ವರ್ಷಗಳಿಂದ ಶಾಸಕರಾಗಿರುವ ಅಂಗಾರ ಅವರು ಸಚ್ಚಾರಿತ್ರ್ಯದ ರಾಜಕಾರಣಿಯಾಗಿ , ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪ ಇಲ್ಲದೆಯೇ ಕೆಲಸ ಮಾಡಿದ್ದಾರೆ. ಈ ಹಿಂದಿನ ವಿದ್ಯಮಾನ ಗಮನಿಸಿದರೆ ಒಂದು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗುತ್ತದೆ, 25 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಂಗಾರ ಅವರಿಗೆ ಅರ್ಹವಾಗಿಯೇ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…