ಸುಳ್ಯ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಡಿ ದರ್ಜೆ ನೌಕರರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಅ.31ರಂದು ನಿವೃತ್ತಿಯಾಗಲಿರುವ ಅಚ್ಯುತ ಎ.ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ. ಅಧ್ಯಕ್ಷತೆ ವಹಿಸಿದ್ದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಬೆಳ್ಯಪ್ಪ ಗೌಡ, ಸರಸ್ವತಿ, ನಾರಾಯಣ ನೀರಬಿದಿರೆ, ಸುಕನ್ಯ ಅತಿಥಿಯಾಗಿದ್ದರು.
ಶಾಲು ಹೊದಿಸಿ, ಸ್ಮರಣಿಕೆ, ಚಿನ್ನದ ಉಂಗುರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ರವಿಶ್ರೀ ವಂದಿಸಿದರು.
ಇಲಾಖೆಯ ಮೇಲ್ವಿಚಾರಕಿಯರು, ಸಿಬ್ಬಂದಿ ವರ್ಗದವರು, ನಿವೃತ್ತ ಸಿಬ್ಬಂದಿಗಳು, ಸ್ತ್ರೀ ಶಕ್ತಿ ಸಹಕಾರಿ ಸಂಘದ ಅಧ್ಯಕ್ಷರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…