ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ಅಂಬಿಕಾ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಂದ ಮೇ.31 ರಂದು ಉದ್ಘಾಟನೆಗೊಳ್ಳಲಿದೆ.
ಅದೇ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.
ಗುರುವಂದನಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಗುರುವಂದನಾ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್ ಮಾತನಾಡಿದರು.
ಗುರುವಂದನಾ ಕಾರ್ಯಕ್ರಮ ಸಮಿತಿ ಕಾರ್ಯವಾಹಕರಾಗಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಕಾರ್ಯವಾಹಕ ಕೆ ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಮಿತಿ ಕೋಶಾಧಿಕಾರಿ ಪಿ.ಸತೀಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?