ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ : 9916 ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಸ್ವಯಂಸೇವಕರು

August 22, 2019
10:01 AM

ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಯಂಸೇವಕರಿಂದ ನಡೆಯಿತು. ಈ ಸ್ವಚ್ಛತಾ ಕಾರ್ಯ ನಿರಂತರವಾಗಿ ಭಕ್ತರಿಂದಲೂ ನಡೆಯಲಿ, ನಡೆಯಬೇಕು….


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಆ. 8 ರಿಂದ 15 ರ ವರೆಗೆ ರಾಜ್ಯದೆಲ್ಲೆಡೆ 9916 ಶ್ರದ್ಧಾ ಕೇಂದ್ರಗಳಲ್ಲಿ ನಡೆದ ಸ್ಚಚ್ಛತಾ ಅಭಿಯಾನದಲ್ಲಿ 3,56,840 ಸ್ವಯಂ ಸೇವಕರು ಭಾಗವಹಿಸಿ ಅಭಿಯಾನ ಯಶಸ್ವಿಗೊಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಸ್ವಚ್ಛತಾ ಅಭಿಯಾನದಲ್ಲಿ 9476 ದೇವಸ್ಥಾನಗಳು, 15 ಬಸದಿಗಳು, 37 ಚರ್ಚ್‍ಗಳು, 184 ಮಸೀದಿಗಳು ಹಾಗೂ 204 ಇತರ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾಸರಗೋಡು ಸೇರಿದಂತೆ ರಾಜ್ಯದ ಒಟ್ಟು 31 ಜಿಲ್ಲೆಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಲಾಗಿದೆ.


ಬೆಳಗಾವಿ ಜಿಲ್ಲೆಯಲ್ಲಿಅತಿ ಹೆಚ್ಚು (1020) ಶ್ರದ್ಧಾಕೇಂದ್ರಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಿದ್ದು ಗರಿಷ್ಠ ಸಂಖ್ಯೆಯಲ್ಲಿ (34,543) ಸ್ವಯಂ ಸೇವಕರು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 2017 ರಿಂದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿದ್ದು ಪ್ರತಿವರ್ಷ ಆ. 8 ರಿಂದ 15 ರ ವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾಅಭಿಯಾನ ನಡೆಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror