ಸುಳ್ಯ: ಸಮಾಜವನ್ನೂ, ದೇಶವನ್ನೂ, ಮಾತೆಯರನ್ನೂ, ಗೋಮಾತೆಯನ್ನೂ ರಕ್ಷಿಸಲು ಶ್ರೀಕೃಷ್ಣ ಅಂದು ಮಾಡಿದ್ದ ಕೆಲಸಗಳನ್ನು ಇಂದು ವಿಶ್ಚ ಹಿಂದೂ ಪರಿಷತ್ ಮತ್ತು ಭಜರಂಗದಳ ಮಾಡುತ್ತಿದೆ. ಶ್ರೀಕೃಷ್ಣ ಜಯಂತಿಯಂದು ಆರಂಭಗೊಂಡ ವಿ.ಹಿಂ.ಪ ಭಜರಂಗದಳ ಸಂಘಟನೆಗಳಿಗೆ ಶ್ರೀಕೃಷ್ಣನ ಕೆಲಸಗಳೇ ಆದರ್ಶ ಎಂದು ವಿಶ್ವ ಹಿಂದೂ ಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.
ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಕರೋಡಿ ಅಧ್ಯಕ್ಷತೆ ವಹಿಸಿದ್ದರು.
ವಿ.ಹಿಂ.ಪ ಪುತ್ತೂರು ಜೆಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಭಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್, ಸುಳ್ಯಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ವಿ.ಹಿಂ.ಪ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ವಿ.ಹಿಂ.ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್, ಮೊಸರು ಕುಡಿಕೆ ಉತ್ಸವ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ಪಿ.ರಂಜಿತ್ ಕುಮಾರ್, ಮಾತೃಶಕ್ತಿ ಪ್ರಮುಖ್ ಬಿ.ಲೀಲಾವತಿ ಬಳ್ಳಡ್ಕ, ದುರ್ಗಾವಾಹಿನಿ ಸಂಯೋಜಕಿ ನಮಿತ ಪ್ರವೀಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲತೀಶ್ ಗುಂಡ್ಯ ಸ್ವಾಗತಿಸಿ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ ವಂದಿಸಿದರು. ಶ್ರೀದೇವಿ ನಾಗರಾಜ ಭಟ್ ಮತ್ತು ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…