ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್‍ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್‍ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…