ಸುಳ್ಯ: ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 12 ನೇ ಶಾಖೆ ನಿಂತಿಕಲ್ಲಿನಲ್ಲಿ ನ.1ರಂದು ಕಾರ್ಯಾರಂಭಗೊಂಡಿತು. ಶಾಖಾ ಕಚೇರಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಇದರ ಅಧ್ಯಕ್ಷೆ ಕೆ.ಲಲಿತ ಜಿ.ಟಿ.ದೇವೇ ಗೌಡ ಉದ್ಘಾಟಿಸಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು ಸಮಾರಂಭವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀಕರಣದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ ನೆರವೇರಿಸಿದರು. ಪ್ರಥಮ ಠೇವಣಿ ಪತ್ರವನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ, ಪ್ರಥಮ ಪಾಲು ಪತ್ರವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್, ಪ್ರಥಮ ಸಾಲ ಪತ್ರವನ್ನು ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ವಿತರಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಕೆ.ಎನ್.ಪರಮೇಶ್ವರಯ್ಯ ಕಲ್ಮಡ್ಕ, ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೆಟ್ಟ ಉದಯಕುಮಾರ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ, ಎಣ್ಮೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಹುದೇರಿ, ಧರ್ಮಶ್ರೀ ಆರ್ಕೇಡ್ ನ ಮಾಲಕ ಎಂ.ಮಾಧವ ಗೌಡ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಾಮೋದರ ಎನ್.ಎಸ್, ಲತಾ ಎಸ್.ಮಾವಜಿ, ಉಪಸ್ಥಿತರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ಸ್ವಾಗತಿಸಿ, ನಿರ್ದೇಶ ಪಿ.ಸಿ.ಜಯರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.