Advertisement
ಕಾರ್ಯಕ್ರಮಗಳು

ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

Share

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಂಡಿತು.

ದೀಪಪ್ರಜ್ವಲನೆ ಮಾಡಿ ಸಮಾರಂಭವನ್ನು ಉದ್ಘಾಟಿಸಿ, ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಂಗಳೂರು
ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ‘ಸಹಕಾರ ಸಂಘಗಳು ಸಮಾಜದ ಅಭಿವೃದ್ಧಿಗೆ ಪೂರಕ. ಸೊಸೈಟಿಯ ಸೇವೆ ಎಲ್ಲೆಡೆ ಪಸರಿಸಬೇಕು. ಸಂಘ ತನ್ನ ಅಭಿವೃದ್ಧಿಯೊಂದಿಗೆ ನೊಂದವರ ಕಣ್ಣೀರನ್ನು ಒರೆಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಿ ಸಮಾಜಕ್ಕೆ ಮಾದರಿಯಾಗಿದೆ. ಸದೃಢ ಆಡಳಿತ ಮಂಡಳಿಯ ಅನುಭವವೇ ವೆಂಕಟರಮಣ ಸೊಸೈಟಿಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದರು.

ನೂತನ ಶಾಖಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ‘ವೆಂಕಟರಮಣ ಸೊಸೈಟಿ ಸಾಧನೆಯ‌ ಛಲ ಹೊಂದಿದೆ. ವ್ಯಕ್ತಿಯ ಆರ್ಥಿಕತೆಯ ಬಲವರ್ಧನೆಗೆ ಸಹಕಾರಿ ಸಂಘಗಳು ಅವಶ್ಯ. ಆ ನಿಟ್ಟಿನಲ್ಲಿ ಸೊಸೈಟಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ವಿಸ್ತಾರವಾಗಿ ಬೆಳೆದಿರುವುದು ಶ್ಲಾಘನೀಯ’ ಎಂದರು.

ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉದ್ಘಾಟಿಸಿದರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲಪತ್ರವನ್ನು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಿದ್ದರು.

ಸೊಸೈಟಿಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ಪಿ.ಸಿ‌.ಜಯರಾಮ, ಸದಾನಂದ ಜಾಕೆ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಕೆ.ಸಿ.ಸದಾನಂದ, ಲತಾ ಎಸ್.ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್ ಗಂಗಾಧರ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಂದಿಸಿದರು. ನಿರ್ದೇಶಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago