ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಸಂಸ್ಥೆಯ ವತಿಯಿಂದ ಪರಿಹಾರ ಧನ ವಿತರಣೆಯು ನಡೆಯುವುದು.
ನೂತನ ಶಾಖಾ ಕಚೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಹಾಗೂ ಪರಿಹಾರಧನ ವಿತರಣೆ ಮಾಡಲಿದ್ದಾರೆ. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ನೆರವೇರಿಸಲಿದ್ದಾರೆ. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್,
ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲ ಪತ್ರವನ್ನು ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.